ಮಲ್ಪೆ ಅಭಿವೃದ್ಧಿ ಸಮಿತಿ ಬರ್ಖಾಸ್ತು – ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಉಡುಪಿ : ಕಳೆದ 20 ವರ್ಷಗಳಿಂದ ಮಲ್ಪೆ ಬೀಚ್ ಹಾಗೂ ಸೈಂಟ್ ಮೇರೀಸ್ ದ್ವೀಪದ ನಿರ್ವಹಣೆಯನ್ನು ನಿರ್ವಹಿಸುತ್ತಾ ಬಂದಿರುವ ಮಲ್ಪೆ ಅಭಿವೃದ್ಧಿ ಸಮಿತಿಯನ್ನು ಬರ್ಖಾಸ್ತುಗೊಳಿಸಲಾಗಿದೆ. ಅದರ ಅಧಿಕಾರ ಹಾಗೂ ಅದು ನಿರ್ವಹಿಸುತ್ತಿರುವ ಎಲ್ಲಾ ಕಾರ್ಯಗಳನ್ನು ಮತ್ತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಅವರು ಇದನ್ನು ಪ್ರಕಟಿಸಿದರು.ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

20 ವರ್ಷಗಳ ಹಿಂದೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಮಲ್ಪೆ ಬೀಚ್ ಹಾಗೂ ಸೈಂಟ್ ಮೇರೀಸ್ ದ್ವೀಪದ ನಿರ್ವಹಣೆಯನ್ನು ಮಲ್ಪೆ ಅಭಿವೃದ್ಧಿ ಸಮಿತಿಗೆ ನೀಡಿತ್ತು. ಆದರೆ ಪ್ರಸ್ತುತ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗೆ ಹಾಗೂ ಸಮಿತಿಯ ಕಾರ್ಯ ವ್ಯಾಪ್ತಿಗೆ ಇದು ಅಡೆತಡೆಯಾಗುತ್ತಿರುವುದರಿಂದ ಹಾಗೂ ಕಾನೂನು ವ್ಯಾಪ್ತಿಯಲ್ಲೂ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಇವುಗಳ ನಿರ್ವಹಣೆಯ ಅಧಿಕಾರವನ್ನು ಹಿಂದಕ್ಕೆ ಪಡೆದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಗೆ ಮರಳಿ ನೀಡಲಾಗಿದೆ ಎಂದವರು ತಿಳಿಸಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !