ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ : ಅಡಿಕೆ ಮರ ಹತ್ತಿ ಅಡಿಕೆ ಕೀಳುತ್ತಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನ.13ರ ಬುಧವಾರ ನಡೆದಿದೆ.

ಮೃತಪಟ್ಟ ಕಾರ್ಮಿಕನನ್ನು ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್ ಲೋಬೊ(45) ಎಂದು ಗುರುತಿಸಲಾಗಿದೆ.

ಜೋನ್ ಲೋಬೊ ಅವರು ನ. 13ರಂದು ಬೋಳಂಗಡಿ ಪದ್ಮನಾಭ ಪ್ರಭು ಎಂಬವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಡಿಕೆ ಮರದಿಂದ ಬಿದ್ದಿದ್ದಾರೆ. ತಕ್ಷಣ ಅವರನ್ನು ‌ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಪತ್ನಿ ಸ್ವಪ್ನ ವಿ.ಎಂ. ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ