ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಉಳ್ಳಾಲ : ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಕ್ಯ ಸಮೀಪದ ಕನೀರುತೋಟದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕೊಲ್ಯ ಕನೀರುತೋಟದ ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ್ (46) ಎಂದು ಗುರುತಿಸಲಾಗಿದೆ.

ಯಶೋಧರ್ ಅವರು ಬೆಳಗ್ಗೆ ತನ್ನ ಮನೆ ಸಮೀಪದ ತೋಟವೊಂದರ ಬಳಿ ಶೇಂದಿ ತೆಗೆಯುತ್ತಿದ್ದಾಗ ಆಯತಪ್ಪಿ ತೆಂಗಿನ ಮರದಿಂದ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಹಲವು ವರ್ಷಗಳಿಂದ ಯಶೋಧರ್ ಶೇಂದಿ ತೆಗೆಯುವ ಕೆಲಸ ಮಾಡುತ್ತಿದ್ದರು. ಈ ಹಿಂದೆ ಕೆಲಸದ ವೇಳೆ ಕಡಿಮೆ ರಕ್ತದೊತ್ತಡದಿಂದಾಗಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಹೀಗಾಗಿ ಈಗಲೂ ಅದೇ ಕಾರಣದಿಂದ ಆಯತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Related posts

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ