ತೋಟಕ್ಕೆ ಹೋಗಿದ್ದ ವ್ಯಕ್ತಿ ಕಾಲು ಜಾರಿ ಕೆರೆಗೆ ಬಿದ್ದು ಮೃತ್ಯು..!

ವಿಟ್ಲ : ತೋಟಕ್ಕೆ ಹೋಗಿದ್ದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕನ್ಯಾನ ಗ್ರಾಮದ ಪರಕಜೆಯಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಕನ್ಯಾನ ಪರಕಜೆ ನಿವಾಸಿ ಬಾಲಕೃಷ್ಣ ಭಂಡಾರಿ(56) ಎಂದು ಗುರುತಿಸಲಾಗಿದೆ.

ಬಾಲಕೃಷ್ಣ ಭಂಡಾರಿ ಜೂ. 6ರ ಮಧ್ಯಾಹ್ನ 3ರ ಸುಮಾರಿಗೆ ತೋಟಕ್ಕೆ ಹೋಗಿದ್ದಾರೆ. ರಾತ್ರಿ 10ರ ಸುಮಾರಿಗೆ ಹುಡುಕಾಡಿದಾಗ ಅವರ ಮೃತದೇಹ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಸುಮಾರು 10 ಅಡಿ ಆಳದ ಕೆರೆಗೆ ಇಳಿಯಲು ಮಾಡಿದ ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದು ನೀರಿನಲ್ಲಿ ಉಸಿರುಕಟ್ಟಿ ಮೃತಪಟ್ಟಿರುವುದಾಗಿ ಅವರ ಅಣ್ಣನ ಪುತ್ರ ಅಶೋಕ್ ಪಿ. ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ