4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆಸಾಮಿ ಅರೆಸ್ಟ್

ಮಂಗಳೂರು : ಎನ್‌ಡಿಪಿಎಸ್ ಆ್ಯಕ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದ ಬಳಿಕ 4ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ, ಒಳಪೇಟೆಯ, ಟಿ.ಸಿ.ರಸ್ತೆಯ ನಿವಾಸಿ ಸಲೀಂ ಅಲಿಯಾಸ್ ಮೊಹಮ್ಮದ್ ಸಲೀಂ(38) ಬಂಧಿತ ಆರೋಪಿ.

ಇಎನ್‌ಸಿ ಠಾಣೆಯಲ್ಲಿ ಕಲಂ : 8©️,20(b) (ii) (a) NDPS ACT ಪ್ರಕರಣಕ್ಕೆ ಸಂಬಂಧಿಸಿದ 2019ರಲ್ಲಿ ಈತನನ್ನು ದಸ್ತಗಿರಿ ಮಾಡಲಾಗಿತ್ತು. ನ್ಯಾಯಾಲಯ ಈತನಿಗೆ ಜಾಮೀನು ನೀಡಿತ್ತು. ಬಳಿಕ ಈತನು ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಅಕ್ಟೋಬರ್ 22ರಂದು ಸೆನ್ ಕ್ರೈಂ ಪೊಲೀಸ್ ಠಾಣಾ ಸಿಬ್ಬಂದಿ ಆತನನ್ನು ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ