ಮಣ್ಣು ಕುಸಿದು ಅವಘಡದ ಬೆನ್ನಲ್ಲೇ ಎಚ್ಚೆತ್ತ ಮನಪಾ – ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಆದೇಶ

ಮಂಗಳೂರು : ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ.

ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮ ಅಳವಡಿಸಿಕೊಂಡು ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದೆ. ಅವೈಜ್ಞಾನಿಕವಾಗಿ ಭೂಮಿಯನ್ನು ಅಗೆದು ಹಾಕದಂತೆ ಸೂಚನೆ ನೀಡಿದೆ. ಆದೇಶ ಉಲ್ಲಂಘನೆ ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಿ ಮನಾಪ ಆಯುಕ್ತರು ಕಟ್ಟುನಿಟ್ಟಾಗಿ ಆದೇಶಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ