ದೇರಳಕಟ್ಟೆ : ಗ್ಯಾಸ್ ಸೋರಿಕೆಯಿಂದ ಉಂಟಾದ ದುರಂತದಲ್ಲಿ ಚಿಕಿತ್ಸೆ ಫಲಿಸದೇ ಮೂವರು ಮೃತಪಟ್ಟ ಘಟನೆ ನಡೆದ ಮಂಜನಾಡಿ ಕಲ್ಕಟ್ಟದ ಮನೆಗೆ ಶನಿವಾರ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಗ್ಯಾಸ್ ಸೋರಿಕೆಯಿಂದ ಈ ಘಟನೆ ನಡೆದಿರುವ ಹಿನ್ನೆಲೆಯಲ್ಲಿ ಪರಿಹಾರಕ್ಕೆ ಸಂಬಂಧಿಸಿ ಶಿಷ್ಟಾಚಾರ ಪ್ರಕಾರ ದಾಖಲೆ ಸಹಿತ ವರದಿ ನೀಡಬೇಕು ಎಂದು ಸ್ಪೀಕರ್ ಅವರು ಎಚ್‌ಪಿ ಗ್ಯಾಸ್‌ನ ವಲಯ ಮಾರುಕಟ್ಟೆ ಸಿಬ್ಬಂದಿ ರಾಹುಲ್‌ಗೆ ಸೂಚನೆ ನೀಡಿದರು. ಆಯಾ ಇಲಾಖಾಧಿಕಾರಿಗಳು ಆಯಾ ಇಲಾಖೆಗೆ ಸಂಬಂಧಿಸಿದ ವರದಿ ಶೀಘ್ರ ನೀಡಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಹರ್ಷವರ್ಧನ್, ತಹಶೀಲ್ದಾರ್ ಪುಟ್ಟ ರಾಜು, ಕಂದಾಯ ಅಧಿಕಾರಿ ಪ್ರಮೋದ್, ಎಚ್ ಪಿ ಗ್ಯಾಸ್ ವಲಯ ಮಾರುಕಟ್ಟೆ ಸಿಬ್ಬಂದಿ ರಾಹುಲ್, ಎಸಿಪಿ ಧನ್ಯ, ಕೊಣಾಜೆ ಇನ್ಸ್ಪೆಕ್ಟರ್ ರಾಜೇಂದ್ರ,ಸಬ್ ಇನ್ಸ್ಪೆಕ್ಟರ್ ನಾಗರಾಜ್, ಅಗ್ನಿ ಶಾಮಕ ದಳದ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.