ಗಾಂಜಾ ಸೇವನೆ – ಪ್ರತ್ಯೇಕ ಪ್ರಕರಣದಲ್ಲಿ ಐವರನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

ನಗರದ ಕುಂಟಿಕಾನ ಬಸ್ಸು ತಂಗುದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಯಶ್‌ ಪಿ.ರಾವ್‌ (23) ಎಂಬವನನ್ನು ಕಾವೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ನೀರುಮಾರ್ಗ ಜಂಕ್ಷನ್‌ನಲ್ಲಿ ಮಾದಕ ವಸ್ತು ಸೇವಿಸುತ್ತಿದ್ದ ಬೋಳೂರು ನಿವಾಸಿ ರೋಷನ್‌ ಕಿಣಿ (19) ಎಂಬವನನ್ನು ವಶಕ್ಕೆ ಪಡೆದಿದ್ದಾರೆ.

ಅರ್ಕುಳ ಗ್ರಾಮದ ವಳಚ್ಚಿಳ್‌ ವ್ಯೂಪಾಯಿಂಟ್‌ನಲ್ಲಿ ಮಾದಕ ವಸ್ತು ಸೇವಿಸುತ್ತಿದ್ದ ಮೂಲತಃ ಉತ್ತರ ಪ್ರದೇಶ ಅಜಂಗಡ್‌ ಜಲ್ಲೆಯ ಮೊಹಮ್ಮದಪುರ ಗ್ರಾಮದ ನಿವಾಸಿ, ಪ್ರಸ್ತುತ ಬೋಳೂರಿನಲ್ಲಿ ವಾಸವಾಗಿರುವ ಸುಧಾಂಶು ಯಾದವ್‌ (22) ಬಂಧಿತ ಆರೋಪಿ.

ಅಳಪೆ ಗ್ರಾಮದ ಪಡೀಲ್‌ ರೈಲ್ವೇ ಸೇತುವೆಯಿಂದ ಪೆರ್ಲ ರಸ್ತೆಗೆ ಹೋಗುವ ಪುವೋಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಬಿಬಿನ್‌ ದೇವ್‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ.

ಎಕ್ಕೂರು ಮೈದಾನದ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸೇವನೆ ಮಾಡುತ್ತಿದ್ದ ಸುಹೈಲ್‌ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ