ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ – ಜಿಲ್ಲೆಯ ಬಿಜೆಪಿ ಶಾಸಕರು ಭಾಗಿ

ಉಡುಪಿ : ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಾರ್ಯಕರ್ತರು ಸರಕಾರಿ ಸೇವೆಗಾಗಿ ಅಧಿಕಾರಿಗಳ ಬಳಿಗೆ ಹೋದರೆ ಅವರನ್ನು ಕಡೆಗಣಿಸಲಾಗುತ್ತಿದೆ. ಮಣಿಪಾಲ ಠಾಣೆಯ ಸಿಬ್ಬಂದಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಪಿಎಸ್ಐ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಾನೆ. ಖಾಕಿ ರೌಡಿಸಂ ಇಲ್ಲಿ ನಡೆಯುವುದಿಲ್ಲ ಎಂದು ಶಾಸಕ ಯಶ್ಪಾಲ್ ಸುವರ್ಣ ಎಚ್ಚರಿಕೆ ನೀಡಿದರು.

ರಾಜ್ಯ ಬಜೆಟ್​ನಲ್ಲಿ ಉಡುಪಿ ಜಿಲ್ಲೆ ಕಡೆಗಣನೆ ಹಾಗೂ ಮಲತಾಯಿ ಧೋರಣೆ ಖಂಡಿಸಿ ಬಿಜೆಪಿ ಉಡುಪಿ ನಗರ ಘಟಕ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆ ಹಾಗೂ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್​ ಯಾರ್ಡ್​ನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಈ ಜಿಲ್ಲೆಯ ಜನರು ಬುದ್ದಿವಂತರಾಗಿದ್ದು, ಖಾಕಿಗೆ ಗೌರವ ಕೊಡುತ್ತಾರೆ. ಅಧಿಕಾರಿಗಳು, ಕಾನೂನಿಗೆ ವಿಶೇಷ ಗೌರವವನ್ನು ನೀಡುವವರು ಇದೇ ಜಿಲ್ಲೆಯವರು. ಆದರೆ ಇಲ್ಲಿನ ಜನರ ತಾಳ್ಮೆಯನ್ನು ಪರೀಕ್ಷಿಸುತ್ತಾ, ಸುಖಾ ಸುಮ್ಮನೆ ಅಮಾಯಕರ ಮೇಲೆ ದೌರ್ಜನ್ಯ ಎಸಗಿದರೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದರು.

ಜಿಲ್ಲೆಯಲ್ಲಿ ಐವರು ಶಾಸಕರು ಬಿಜೆಪಿಯವರು ಎಂಬ ಕಾರಣಕ್ಕೆ ಸಿಎಂ ಸಿದ್ದರಾಮಯ್ಯನವರು ಉಡುಪಿಯನ್ನು ಕಡೆಗಣಿಸುತ್ತಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಯಾವುದೇ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಮುಂದಿನ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಯನ್ನು ಪರಿಗಣಿಸಿ, ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ಉಡುಪಿಗರ ತಾಕತ್ತನ್ನು ಬೆಂಗಳೂರಿನಲ್ಲಿ ಪ್ರದರ್ಶಿಸಲು ಸಿದ್ದರಿದ್ದೇವೆ ಎಂದು ಸವಾಲು ಹಾಕಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ