ಉಡುಪಿ : ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಸಭೆಯ ಬಳಿಕ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಆಗ್ರಹ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಸಂಸದರಾದ ರಮೇಶ್ ಜಿಗಜಿಣಗಿ, ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷರುಗಳಾದ ಸಾಬು ದೊಡ್ಮನಿ, ಗೋಪಾಲ್ ಘಟ್ ಕಾಂಬಳೆ, ದಿನಕರ ಬಾಬು, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಮಾಜಿ ಶಾಸಕ ಹರ್ಷವರ್ಧನ್, ಎಸ್.ಸಿ. ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಓದೋ ಗಂಗಪ್ಪ, ದೀಪಕ್ ದೊಡ್ಡಯ್ಯ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಎಸ್.ಟಿ. ಮೋರ್ಚಾ ಪ್ರಮುಖರಾದ ಪ್ರಭಾಕರ ವಿ., ಉದಯ ಕುಮಾರ್, ರವೀಂದ್ರ, ಸುಮಾ ನಾಯ್ಕ್, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ವಿವಿಧ ಸ್ತರದ ಅಧ್ಯಕ್ಷರು, ಪದಾಧಿಕಾರಿಗಳು, ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.