ಅವೈಜ್ಞಾನಿಕ ಮೀನುಗಾರಿಕೆ ವಿರುದ್ಧ ನಾಳೆ ಬೃಹತ್ ಪ್ರತಿಭಟನೆ, ನಾಡದೋಣಿ ಮೀನುಗಾರಿಕೆ ಬಂದ್

ಕುಂದಾಪುರ : ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟ ನೇತೃತ್ವದಲ್ಲಿ ಅವೈಜ್ಞಾನಿಕ ಮೀನುಗಾರಿಕೆ ವಿರುದ್ಧ ನಾಳೆ ಬೃಹತ್ ಪ್ರತಿಭಟನೆ ನಡೆಯಲಿದೆ.

ಬೆಳಕು ಮತ್ತು ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧದ ಅನುಷ್ಠಾನಕ್ಕಾಗಿ ಈ ಪ್ರತಿಭಟನೆ ಆಯೋಜನೆಗೊಂಡಿದೆ. ಜೊತೆಗೆ ಸೀಮೆಎಣ್ಣೆ ದರ ಕಡಿಮೆ ಮಾಡುವುದರ ಬಗ್ಗೆಯೂ ಧರಣಿ ಆಯೋಜಿಸಲಾಗಿದ್ದು ಜನವರಿ 10ರಂದು ತ್ರಾಸಿ ಬೀಚ್‌ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಮೂರು ಜಿಲ್ಲೆಗಳ ನಾಡದೋಣಿ ಮೀನುಗಾರರು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಾಡದೋಣಿ ಮೀನುಗಾರಿಕೆಗೆ ರಜೆ ಘೋಷಣೆ ಮಾಡಲಾಗಿದೆ. ಮೂರು ಜಿಲ್ಲೆಗಳ ಮೀನುಗಾರರು ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಅಧ್ಯಕ್ಷ ಅಳ್ವೆಕೋಡಿ ನಾಗೇಶ್ ಖಾರ್ವಿ ತಿಳಿಸಿದ್ದಾರೆ.

Related posts

ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ರಾಜ್ಯ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ

ಕೋಟದಲ್ಲಿ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು