ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಮಣಿಪಾಲ : ಜಿಲ್ಲೆಯ ಬಂದರಿಗೆ ಅಕ್ರಮವಾಗಿ ಪ್ರವೇಶಿಸುವ ಹೊರ ರಾಜ್ಯದ ಬೋಟುಗಳಿಗೆ ಗರಿಷ್ಠ ದಂಡ ವಿಧಿಸಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ವಿಷಯವಾಗಿ ಮೀನುಗಾರಿಕೆ ಇಲಾಖೆ ಮತ್ತು ಕರಾವಳಿ ಕಾವಲು ಪಡೆ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.

ಹೊರ ರಾಜ್ಯದ ಬೋಟುಗಳ ಅಕ್ರಮ ಪ್ರವೇಶ, ಬುಲ್‌ಟ್ರಾಲ್‌ ಹಾಗೂ ಲೈಟ್‌ ಹಾಕಿ ಮೀನು ಹಿಡಿಯುವುದು ಸಹಿತ ಮೀನುಗಾರರ ವಿವಿಧ ಸಮಸ್ಯೆಗಳ ಕುರಿತು ಇಲಾಖೆಯ ಅಧಿಕಾರಿಗಳು ಹಾಗೂ ಮೀನುಗಾರ ಮುಖಂಡರು, ಮೀನುಗಾರ ವಿವಿಧ ಸಂಘಟನೆಗಳ ಪದಾಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದರು.

ಸದ್ಯ ಕೇವಲ 5 ಸಾ. ರೂ. ದಂಡ ವಿಧಿಸುವುದರಿಂದ ಅವರಿಗೆ ಭಯ ಇಲ್ಲದಾಗಿದೆ. ಅವರಿಗೆ ಕಾನೂನಿನ ಭಯ ಹುಟ್ಟಿಸಲು ಅವರು ತರುವ ಮೀನಿನ ಮೌಲ್ಯದ 5 ಪಟ್ಟು ದಂಡ ವಿಧಿಸಿ, ಬೋಟನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಇದಕ್ಕಾಗಿ ಮೀನುಗಾರಿಕೆ ಇಲಾಖೆ ಹಾಗೂ ಕರಾವಳಿ ಕಾವಲು ಪಡೆ ಒಟ್ಟಾಗಿ ಕಾರ್ಯಾಚರಣೆ ಮಾಡಬೇಕು. ಕಾವಲು ಪಡೆಯವರು ಕರೆ ಮಾಡಿದ ಸಂದರ್ಭದಲ್ಲಿ ಇಲಾಖೆ ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಬೇಕು. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಿ, ದಿನದ 24 ಗಂಟೆಯೂ ಕಾರ್ಯಾಚರಣೆ ಮಾಡವಂತೆ ಮಾಡಬೇಕು ಎಂದು ಸೂಚನೆ ನೀಡಿದರು.

ಅಕ್ರಮವಾಗಿ ಪ್ರವೇಶಿಸುವ ಬೋಟುಗಳಿಗೆ ಗರಿಷ್ಠ ದಂಡ ವಿಧಿಸಲು ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲು ಬೇಕಾದ ಪ್ರಸ್ತಾವನೆಯನ್ನು ರಾಜ್ಯಕ್ಕೆ ಶೀಘ್ರದಲ್ಲೇ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು