ಬೆಂಗಳೂರಿನಿಂದ ಎಂಡಿಎಂಎ ತಂದು ಮಂಗಳೂರಿನಲ್ಲಿ ಮಾರಾಟ – ಓರ್ವ ಅರೆಸ್ಟ್

ಮಂಗಳೂರು : ಬೆಂಗಳೂರಿನಿಂದ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 36ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಮಹಮ್ಮದ್ ಸಫ್ವಾನ್(32) ಬಂಧಿತ ಆರೋಪಿ.

ಈತ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಉಳ್ಳಾಲಬೈಲ್ ಪರಿಸರದಲ್ಲಿ ಬೈಕ್‌ನಲ್ಲಿ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ವಶಕ್ಕೆ ಪಡಿಸಿಕೊಂಡು ಬೈಕ್ ಸೀಟಿನಲ್ಲಿ 90,000 ರೂ. ಮೌಲ್ಯದ 36ಗ್ರಾಂ ಎಂಡಿಎಂಎ ಪತ್ತೆಯಾಗಿದೆ. ಈತನಿಂದ ಎಂಡಿಎಂಎ ಸೇರಿದಂತೆ ಮೊಬೈಲ್ ಫೋನ್, ಡಿಜಿಟಲ್ ತೂಕಮಾಪಕ ಹಾಗೂ ಬೈಕ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 2,05,500 ರೂ. ಆಗಬಹುದೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ

Related posts

ಮಣಿಪಾಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿ ಮಹೇಶ್ ಪ್ರಸಾದ್

ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರ

ಅಕ್ರಮ ಮರಳು ಸಾಗಾಟ ಪತ್ತೆ; 9 ಸಾವಿರ ರೂ. ಮೌಲ್ಯದ 3 ಯುನಿಟ್‌ ಮರಳು ಸಹಿತ ಟಿಪ್ಪರ್‌ ವಶ