ಜಿಲ್ಲೆಯಲ್ಲಿ ಸಿಎನ್‌ಜಿ ಪೂರೈಕೆಯಲ್ಲಿ ವ್ಯತ್ಯಯದ ಬಗ್ಗೆ ಸಭೆ : ಮೂಲಭೂತ ವ್ಯವಸ್ಥೆ ಮಾಡಿಕೊಳ್ಳಲು ಅದಾನಿ ಸಂಸ್ಥೆಗೆ ಕೋಟ ಸೂಚನೆ

ಉಡುಪಿ : ಅದಾನಿ ಮತ್ತು ಗೇಲ್ ಕಂಪೆನಿಗಳು ತಮ್ಮ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಂಡು, ಅದಾನಿ ಕಂಪೆನಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಜಿಲ್ಲೆಯಲ್ಲಿ ಸಿಎನ್‌ಜಿ ಅನಿಲದ ಪೂರೈಕೆಗೆ ಬೇಕಾದ ಮೂಲಭೂತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ಸೂಚನೆ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸಿಎನ್‌ಜಿ ಅನಿಲದ ವಿತರಣೆಯಲ್ಲಿ ಆಗುತ್ತಿರುವ ವ್ಯತ್ಯಯದ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿ, ವಿತರಕ ಸಂಸ್ಥೆಗಳು ಹಾಗೂ ಜಿಲ್ಲೆಯ ಸಿಎನ್‌ಜಿ ಗ್ಯಾಸ್‌ ಬಂಕ್‌ಗಳ ಮಾಲಕರ ಸಭೆಯಲ್ಲಿ ಅವರು ಚರ್ಚೆಯ ಬಳಿಕ ಈ ಸೂಚನೆಗಳನ್ನು ವಿತರಕ ಅದಾನಿ ಹಾಗೂ ಗೇಲ್ ಕಂಪೆನಿಗಳ ಅಧಿಕಾರಿಗಳಿಗೆ ನೀಡಿದರು.

ಸಭೆಯ ಪ್ರಾರಂಭದಲ್ಲಿ ಮಾತನಾಡಿದ ಸಂಸದ ಕೋಟ, ಈ ಹಿಂದೆ ಕೂಡ ಹಲವು ಭಾರಿ ಸಮಸ್ಯೆಗಳು ಉಂಟಾಗಿದ್ದವು. ಅದು ಇನ್ನೂ ಕೂಡ ಮುಂದು ವರಿಯುತ್ತಿದೆ. ಇದಕ್ಕೆ ಕಾರಣಗಳೇನು ಎಂದು ವಿತರಕ ಕಂಪೆನಿಗಳನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಅದಾನಿ ಪವರ್ಸ್ ಕಂಪೆನಿಯ ಕಿಶೋರ್ ಕುಮಾ‌ರ್, ಮಂಗಳೂರಿನ ಪಣಂಬೂರಿನಲ್ಲಿ ಕೆಐಓಸಿಯ ಸ್ಥಳದಲ್ಲಿ ಪೈಪ್‌ಲೈನ್ ಹಾದು ಹೋಗಬೇಕಿದೆ. ಇದಕ್ಕೆ ಅವರು ಅನುಮತಿ ನೀಡಲು ನಿರಾಕರಿಸುತ್ತಿರು ವುದರಿಂದ ಪೈಪ್‌ ಲೈನ್ ಮೂಲಕ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈಗ ವಾಹನಗಳ ಮೂಲಕ ಸಾಗಾಟ ಮಾಡಲಾಗುತ್ತಿದೆ. ಇಲ್ಲಿ ಕೆಲವೊಂದು ತಾಂತ್ರಿಕ ಸಮಸ್ಯೆಗಳು ಇರುವುದರಿಂದ ವಿಳಂಬವಾಗುತ್ತಿದೆ ಎಂದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು