ಅಕ್ರಮ ಮರಳು ಅಡ್ಡೆ ಮೇಲೆ ಗಣಿ ಅಧಿಕಾರಿಗಳ ದಾಳಿ, 5 ದೋಣಿಗಳು ವಶ

ಮಂಗಳೂರು : ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಶನಿವಾರ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಎಡೆಬಿಡದೆ ನಿರಂತರ ರಾತ್ರಿ ವೇಳೆ ಗಣಿಗಾರಿಕೆ ನಡೆಸುತ್ತಿದ್ದು ಇದೀಗ ಕೇವಲ ನಾಟಕೀಯ ರೀತಿಯ ದಾಳಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗುರುಪುರ ಉಳೈಬೆಟ್ಟು ಪ್ರದೇಶದಲ್ಲಿರುವ ಮಣೇಲ್ ಡ್ಯಾಮ್ ಬಳಿ ದಿನನಿತ್ಯ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿರುವುದರಿಂದ ಡ್ಯಾಮ್ ಅಡಿ ಭಾಗಕ್ಕೆ ಅಪಾರ ಹಾನಿಯಾಗಿರುವ ಸಂಭವ ಹೆಚ್ಚಾಗಿರುವುದು ತಿಳಿದುಬಂದಿದೆ. ಇಲ್ಲಿ ಎಲ್ಲ ಪಕ್ಷದ ಕಾರ್ಯಕರ್ತರು ಜೊತೆಗೂಡಿ ಗಣಿಗಾರಿಕೆ ನಡೆಸುತ್ತಿದ್ದಾರೆಂದು ಮಾಹಿತಿ ದೊರೆತಿದೆ.

ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 5 ದೋಣಿಗಳನ್ನು ಒಂದು ಮೋಟಾರು, ಗ್ಯಾಸ್‍ಸಿಲಿಂಡರ್ ವಶಪಡಿಸಲಾಯಿತು.

ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಉಪತಿತರಿದ್ದರು.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ