ಪತ್ರಕರ್ತ ಜಯಕರ ಸುವರ್ಣ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಉಡುಪಿ : ಉಡುಪಿಯ ಪತ್ರಕರ್ತ ಜಯಕರ ಸುವರ್ಣ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.

ದೂರದರ್ಶನದ ಉಡುಪಿ ಜಿಲ್ಲಾ ವರದಿಗಾರಾಗಿದ್ದ ಜಯಕರ ಸುವರ್ಣ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಫೋಟೋಗ್ರಾಫರ್ಸ್ ಅಸೋಸಿಯೇಷನ್ (ಎಸ್‌ಕೆಪಿಎ) ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದರು.

ಮೃತ ಜಯಕರ ಸುವರ್ಣ ಕುಟುಂಬ ವರ್ಗದವರಿಗೆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ