ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಉಡುಪಿ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ಸಚಿವರಾಗಿ, ರಾಜ್ಯಪಾಲರಾಗಿ ಅವರು ಈ ನಾಡಿಗೆ ಸಲ್ಲಿಸಿದ ಸೇವೆ ಅನುಪಮವಾಗಿದೆ. ನನ್ನ ರಾಜಕೀಯ ಜೀವನದಲ್ಲಿ ಅವರು ಗುರುವಿನಂತೆ ಇದ್ದು ಮಾರ್ಗದರ್ಶನ ನೀಡುತ್ತಿದ್ದರು. ಅವರ ಅವಧಿಯಲ್ಲಿ ಐಟಿ, ಬಿಟಿ ಕ್ಷೇತ್ರದಲ್ಲಿನ ಸಾಧನೆಯಿಂದಾಗಿ ಕರ್ನಾಟಕ ವಿಶ್ವದಲ್ಲೇ ಹೆಸರಾಗುವಂತೆ ಮಾಡಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ.

ಅಜಾತಶತ್ರುಗಳಾಗಿದ್ದ ಅವರು, ಕಿರಿಯ ರಾಜಕಾರಣಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದ್ದರು. ಅವರ ನಡೆ ನುಡಿ, ಜೀವನ ಶೈಲಿ, ರಾಜಕೀಯದ ಹೆಜ್ಜೆಗಳು ಸದಾ ಅನುಕರಣೀಯ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗದ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

Related posts

ಬ್ರಹ್ಮಾವರದ ಸರಕಾರಿ ಪದವಿ ಪೂರ್ವ ಕಾಲೇಜು “ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್” ಆಗಿ ನಾಮಕರಣ

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾಗಿ ಫ್ರ್ಯಾಂಕೀ ಡಿಸೋಜಾ ಕೊಳಲಗಿರಿ ಆಯ್ಕೆ; ಗೌರವಾಧ್ಯಕ್ಷರಾಗಿ ಕೃಷ್ಣಕುಮಾರ್ ಆಯ್ಕೆ

ಸುಮೊಟೋ ಕೇಸ್ : ಹಿಂದೂ ಮುಖಂಡರಿಗೆ ಜಾಮೀನು ಮಂಜೂರು