ಉಡುಪಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಉಡುಪಿಯಲ್ಲಿ ಗುರುವಾರ ರಾತ್ರಿ ಆಟೋ ಚಾಲಕ ಅಬ್ಬೂಬಕ್ಕರ್ ಎಂಬುವರ ಕೊಲೆ ಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಅವರಿಂದ ಮಾಹಿತಿ ಕಲೆ ಹಾಕಿದರು.

ಜಿಲ್ಲೆಯ ಪರಿಸ್ಥಿತಿ ಹಾಗೂ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ಪಡೆದ ಸಚಿವರು, ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ