ಬಾಲಕಿ ಅತ್ಯಾಚಾರ ಪ್ರಕರಣ – ಆರೋಪಿ ಬಳ್ಳಾರಿಯಲ್ಲಿ ಬಂಧನ

ಕಾಪು : ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ 2 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಕಾಪು ಪೊಲೀಸರು ಬಳ್ಳಾರಿಯಲ್ಲಿ ಬಂಧಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹಟ್ಟಿ ಚಿರಾತಗುಂದ ನಿವಾಸಿ ಚೇತನ್‌ ಯಾನೆ ತಿಪ್ಪೇಶ್‌ ಬಂಧಿತ ಆರೋಪಿ. ಈತ ಕಳೆದ ವರ್ಷ ಶಂಕರಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ್ದ. ಎರಡು ತಿಂಗಳ ಬಳಿಕ ಈ ವಿಚಾರ ಮನೆಯವರಿಗೆ ಗೊತ್ತಾಗಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಈ ಸಂಬಂಧ ಶಿರಾಳಕೊಪ್ಪ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ಕಾಪು ಠಾಣೆಗೆ ವರ್ಗಾಯಿಸಿದ್ದು, ನೊಂದ ಬಾಲಕಿಯ ಹೇಳಿಕೆಯಂತೆ 2024ರ ಮಾರ್ಚ್ 19ರಂದು ಚೇತನ್‌ ಯಾನೆ ತಿಪ್ಪೇಶ್‌ನ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ