ಅರ್ಹ ಬಗರ್ ಹುಕುಂ ಅರ್ಜಿಗಳ ಶೀಘ್ರ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

ಬೈಂದೂರು : ಬೈಂದೂರು ತಾಲೂಕು ಕಚೇರಿಯಲ್ಲಿ ಬೈಂದೂರು ಶಾಸಕರಾದ ಗುರುರಾಜ್‌ ಗಂಟಿಹೊಳೆ ಅವರು ಅಕ್ರಮ ಸಕ್ರಮ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಸಿದರು.

ಅಧಿಕಾರಿಗಳು ಆನ್‌ಲೈನ್‌ನಲ್ಲಿ ಅರ್ಜಿ ಅಪ್ಲೋಡ್ ಮಾಡುವ ಸಮಯದಲ್ಲಿ ಎದುರಾಗಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಸಹರಿಸುವ ನಿಟ್ಟಿನಲ್ಲಿ ಶಾಸಕರು ಸಂಬಂಧಪಟ್ಟವರಿಗೆ ಫೋನ್ ಕರೆಯ ಮೂಲಕ ಗಮನಕ್ಕೆ ತಂದು ತಾಂತ್ರಿಕ ಸಮಸ್ಯೆಯನ್ನು ಸಭೆಯಲ್ಲೇ ಬಗೆಹರಿಸಿದರು.

ಸಮಿತಿ ಮುಂದೆ ಅಂತಿಮವಾಗಿ ಹಾಜರುಪಡಿಸಲು ಹಾಗೂ ಜನವರಿ 2‌ನೇ ವಾರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಬಗರ್ ಹುಕುಂ ಕಡತ ವಿಲೇವಾರಿ ಸಪ್ತಾಹ ಸಲುವಾಗಿ ಬಾಕಿ ಇರುವ ಕಡತಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಪೂರ್ವಭಾವಿ ಚರ್ಚೆ ನಡೆಸಿದರು. 94‌ಸಿ ಅಡಿ ಅರ್ಹ ಅರ್ಜಿಗಳು ವಿಲೇವಾರಿ ಬಾಕಿ ಇರುವ ಗ್ರಾಮಗಳಲ್ಲಿ ಸಮಸ್ಯಾತ್ಮಕವಲ್ಲದ ಅರ್ಜಿಗಳಿಗೆ ಕೂಡಲೇ ಹಕ್ಕು ಪತ್ರ ಮಂಜೂರು ಮಾಡಿ ಬಡವರಿಗೆ ಹಕ್ಕು ಪತ್ರ ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಸಭೆಯಲ್ಲಿ ತಾಲೂಕು ತಹಸೀಲ್ದಾರರು, ಉಪ ತಹಸೀಲ್ದಾರರು, ಬಗರ್ ಹುಕುಂ ತಂತ್ರಾಂಶದ ಜಿಲ್ಲಾ ಸಮಾಲೋಚಕರು, ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

‘ಪಂಪ ಭಾರತ ರೀಟೋಲ್ಡ್ ಇಂಗ್ಲಿಷ್ ನೆರೇಟಿವ್’ ಪುಸ್ತಕ ಅನಾವರಣ – ಪಂಪ ಭಾರತ ಇಂಗ್ಲಿಷ್ ಭಾಷೆಗೆ ಅನುವಾದವಾಗಿರುವುದು ಜಾಗತಿಕ ವಿದ್ಯಾಮಾನ : ಡಾ. ಬಿ.ಎ. ವಿವೇಕ ರೈ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್‌ರಿಂದ ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ

ಡೊಂಗರಕೇರಿ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿ