ಸರ್ಕಾರಿ ಬಸ್‌ ದುರಾವಸ್ಥೆಯ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಶಾಸಕ ಗಂಟಿಹೊಳೆ ಪ್ರತಿಭಟನೆ

ಕುಂದಾಪುರ : ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಅನುಷ್ಠಾನದ ಹಿಂದೆ ಬಿದ್ದು ರಾಜ್ಯದ ಹಿತವನ್ನು ಮರೆತಿದೆ ಎಂದು‌ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಅವರು, ಸರ್ಕಾರಿ ಬಸ್‌ ಅವ್ಯವಸ್ಥೆಯ ವಿರುದ್ಧ ಕುಂದಾಪುರದ ಶಾಸ್ತ್ರಿ ಸರ್ಕಲ್‌ನಲ್ಲಿ ಕುಂದಾಪುರ ಎಬಿವಿಪಿ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಗಂಟಿಹೊಳೆ ಅವರು, ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ವಿದ್ಯಾರ್ಥಿಗಳು, ಜನಸಾಮಾನ್ಯರು ಹೈರಾಣಾಗಿದ್ದಾರೆ. ವಿದ್ಯಾರ್ಥಿಗಳಿಗೆ ದಿನನಿತ್ಯ ಓಡಾಡಲು ಸರಿಯಾದ ಬಸ್‌ ವ್ಯವಸ್ಥೆಯನ್ನೂ ಕಲ್ಪಿಸುವಲ್ಲಿ ಸರ್ಕಾರ ಎಡವಿದೆ ಎಂದು ಟೀಕಿಸಿದರು. ವಿದ್ಯಾರ್ಥಿಗಳು ಏನೇ ದೂರು ತೆಗೆದುಕೊಂಡು ಬಂದರೂ, ಅಧಿಕಾರಿಗಳು ಅದಕ್ಕೆ ಸೂಕ್ತವಾಗಿ ಸ್ಪಂದಿಸಬೇಕು, ಅದನ್ನು ಬಿಟ್ಟು ವಿದ್ಯಾರ್ಥಿಗಳಿಗೆ ಗದರುವುದು, ಬೆದರಿಸುವುದು ಇತ್ಯಾದಿಗಳನ್ನು ಮಾಡಿದರೆ ನಾವು ಅದನ್ನು ಸಹಿಸುವುದಿಲ್ಲ ಎಂದು ಅಧಿಕಾರಿಗಳ ವಿರುದ್ಧವೂ ಕಿಡಿಕಾರಿದರು.

ಜಿಲ್ಲಾಡಳಿತ ಈ ಕೂಡಲೇ ಕಾರ್ಯ ಪ್ರವೃತ್ತವಾಗಿ ಸರ್ಕಾರಕ್ಕೆ ಸರ್ಕಾರಿ ಬಸ್ ದುರವಸ್ಥೆಯ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಈಗ ಆಗುತ್ತಿರುವ ಅನಾನುಕೂಲವನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆ ವೇಳೆ ಎಡೆಬಿಡದೆ ಮಳೆ ಸುರಿಯುತ್ತಿದ್ದರೂ, ಮಳೆಯನ್ನು ಲೆಕ್ಕಸಿದೆ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿದ್ದು ವ್ಯಾಪಕ ಮೆಚ್ಚುಗೆಗೂ ಕಾರಣವಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ