ಹೆಜಮಾಡಿ ಟೋಲ್ ಗೇಟ್‌ನಲ್ಲಿ ಸುಂಕ ವಿನಾಯಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಸದರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

ಕಾಪು : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜಮಾಡಿಯಲ್ಲಿ ಹಲವಾರು ವರ್ಷಗಳಿಂದ ಟೋಲ್ ಗೇಟ್ ನಿರ್ಮಾಣಗೊಂಡು ಸುಂಕ ವಸೂಲಾತಿಯನ್ನು ಮಾಡುತ್ತಾ ಬಂದಿರುತ್ತಾರೆ. ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕೆಂದು ಮನವಿಯನ್ನು ಮಾಡಿರುತ್ತಾರೆ.

ಅದರಂತೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಸ್ತಾನ ಟೋಲ್‌ಗೇಟ್‌ನಲ್ಲಿ ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಿದ್ದು, ಅದರಂತೆ ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಪಡುಬಿದ್ರಿ ಜಿಲ್ಲಾ ಪಂಚಾಯತ್‌ನ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿಗೊಳಿಸುವಂತೆ ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಹಾಗೂ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಪಕ್ಷದ ಹಿರಿಯರಾದ ರಮಕಾಂತ್ ಪಡುಬಿದ್ರಿ ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ