ಬ್ರಿಡ್ಜ್ ಹಾಗೂ ತಡೆಗೋಡೆ ಕಾಮಗಾರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ

ಕಾಪು : ಕಾಪು ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೋಗುವ ರಸ್ತೆಯಲ್ಲಿ ಬ್ರಿಡ್ಜ್ ಹಾಗೂ ತಡೆಗೋಡೆ ನಿರ್ಮಾಣಕ್ಕೆ 33.46 ಲಕ್ಷ ರೂಪಾಯಿ ಅನುದಾನ ಮಂಜೂರಾಗಿತ್ತು. ಇದರ ಕಾಮಗಾರಿ ಪೂರ್ಣಗೊಂಡಿದ್ದು ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವಿರಾಜ್ ಸುವರ್ಣ, ಉಪಾಧ್ಯಕ್ಷೆ ಉಷಾ ಕಾಪು ಪುರಸಭೆಯ ಮುಖ್ಯಾಧಿಕಾರಿ ನಾಗರಾಜ್ ಹಾಗೂ ಕಾಪು ಪುರಸಭೆಯ ಸದಸ್ಯರು, ಎಲ್ಲೂರು ಗ್ರಾಮ ಪಂಚಾಯತ್ ಸದಸ್ಯರು ಸ್ಥಳೀಯರು ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ