ರಾಷ್ಟ್ರೀಯ ಹೆದ್ದಾರಿ 160 A ಕಾಮಗಾರಿ ವೀಕ್ಷಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಉಡುಪಿ – ಮಣಿಪಾಲ – ಪರ್ಕಳ – ಆತ್ರಾಡಿ – ಹಿರಿಯಡಕ – ಪೆರ್ಡೂರು ಮುಖ್ಯ ರಸ್ತೆ (ರಾಷ್ಟ್ರೀಯ ಹೆದ್ದಾರಿ 160 A) ಕಾಮಗಾರಿ ಪ್ರಗತಿಯಲ್ಲಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಹಿರಿಯಡಕ, ಪೆರ್ಡೂರು, ಆತ್ರಾಡಿ ಭಾಗದ ವಿವಿಧ ಕಡೆಗೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ನಿರಂತರ ಮಳೆಯಾಗುತ್ತಿರುವುದರಿಂದ ಮಳೆ ನೀರು ಹಾದು ಹೋಗಲು ಸಮರ್ಪಕವಾದ ಚರಂಡಿ ನಿರ್ಮಿಸಿ ಗುಣಮಟ್ಟವನ್ನು ಕಾಯ್ದುಕೊಂಡು ಕಾಮಗಾರಿ ನಡೆಸುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ, ಉಪಾಧ್ಯಕ್ಷರಾದ ದೇವು ಪೂಜಾರಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ರಾಷ್ಟ್ರೀಯ ಹೆದ್ದಾರಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಂಜುನಾಥ್, ಸಹಾಯಕ ಅಭಿಯಂತರರಾದ ಮಂಜುನಾಥ್ ನಾಯಕ್, 80 ಬಡಗಬೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೀಪ್, ಬೊಮ್ಮರಬೆಟ್ಟು, ಪೆರ್ಡೂರು, ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯರು, ಶಕ್ತಿ ಕೇಂದ್ರದ ಪ್ರಮುಖರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕೋಟತಟ್ಟುವಿನಲ್ಲಿ ಹೆಜ್ಜೇನು ದಾಳಿ : ಇಬ್ಬರ ಸ್ಥಿತಿ ಗಂಭೀರ

ಬಾಕಿ ಇರುವ ಮನೆಹಾನಿ, ಬೆಳೆಹಾನಿ ಪರಿಹಾರ ತಕ್ಷಣ ವಿತರಿಸಿ – ಅಧಿಕಾರಿಗಳಿಗೆ ಎಡಿಸಿ ಸೂಚನೆ

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್