ಜೈಲಿನ ಜಾಮರ್‌ನಿಂದ ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಜೈಲಾಧಿಕಾರಿಗಳಿಗೆ ಶಾಸಕ ಕಾಮತ್ ಆಗ್ರಹ

ಮಂಗಳೂರು : ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್‌ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು.

ನಗರದ ಹೃದಯ ಭಾಗದಲ್ಲಿರುವ ಜೈಲಿನ ಜಾಮರ್‌ನಿಂದಾಗಿ ಸುತ್ತಮುತ್ತಲಿನ ಸುಮಾರು ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಕಛೇರಿ, ನ್ಯಾಯಾಲಯ ಸಂಕೀರ್ಣ, ವಕೀಲರ ಕಛೇರಿ, ವಾಣಿಜ್ಯ ಸಂಕೀರ್ಣ ಸೇರಿದಂತೆ ಸ್ಥಳೀಯ ನಾಗರಿಕರಿಗೆ ತೀವ್ರ ಸಮಸ್ಯೆಯಾಗುತ್ತಿದ್ದು ಸಂಬಂಧಪಟ್ಟವರು ಗಮನ ಹರಿಸುತ್ತಿಲ್ಲ ಎಂಬ ಹಲವಾರು ದೂರುಗಳು ಕೇಳಿ ಬರುತ್ತಿವೆ.

ತುರ್ತು ಸಂದರ್ಭದಲ್ಲಿ ಅಂತೂ ದೂರವಾಣಿ ಸಂಪರ್ಕ ಸಾಧ್ಯವಾಗದೇ ವೈದ್ಯಕೀಯ ಸೇವೆಯಂತಹ ಅಗತ್ಯ ಕಾರ್ಯಗಳಿಗೆ ತೊಂದರೆಯಾಗುತ್ತಿರುವುದರಿಂದ ಸಾರ್ವಜನಿಕರು ತೀವ್ರ ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಕೈಗೊಂಡು ಜೈಲಿನ ಜಾಮರ್‌ ಜೈಲು ವ್ಯಾಪ್ತಿಯೊಳಗೆ ಮಾತ್ರ ಕಾರ್ಯ ನಿರ್ವಹಿಸುವಂತೆ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ತಪ್ಪಿಸುವಂತೆ ಶಾಸಕರು ಒತ್ತಾಯಿಸಿದರು.

Related posts

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಕೋಳಿ ಅಂಕದ ವಿಚಾರ ಮತ್ತೆ ಮುನ್ನೆಲೆಗೆ; ಉಡುಪಿ ಶಾಸಕರಿಗೆ ಕಾಂಗ್ರೆಸ್ ಟಾಂಗ್!

ಸಾವಿರಾರು ರೂ. ಚಾಕಲೇಟ್ ಕದ್ದೊಯ್ದ ಚಾಕಲೇಟ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ದಾಖಲು!