ಬಿಲ್ಲವ ಮುಖಂಡ ಡಿ.ಆರ್. ರಾಜು ನಿಧನಕ್ಕೆ ಶಾಸಕ ಮಂಜುನಾಥ ಭಂಡಾರಿ ಸಂತಾಪ

ಮಂಗಳೂರು : ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾಗಿ ಜನಮನ್ನಣೆ ಪಡೆದಿದ್ದ ಡಿ.ಆರ್.ರಾಜು ಅವರು ಹೃದಯಾಘಾತಕ್ಕೆ ತುತ್ತಾಗಿ ಮೃತರಾಗಿದ್ದು ಅವರ ನಿಧನಕ್ಕೆ ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ರಾಜು ಅವರ ಸಾಧನೆ ಗಮನಾರ್ಹವಾದುದು. ಅವರ ಅಗಲುವಿಕೆಯಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ಕುಟುಂಬಕ್ಕೆ ನೀಡಲಿ ಎಂದು ಶಾಸಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ