ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಕೆಲಸ ಮಾಡಿಸುತ್ತಿದೆ – ಶಾಸಕ ಯಶ್ಪಾಲ್ ಸುವರ್ಣ ಆರೋಪ

ಉಡುಪಿ : ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಕೆಲಸ ಮಾಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಚುಕ್ಕಾಣಿ ಹಿಡಿದಿದ್ದಾರೆ, ಎಲ್ಲಾ ಗ್ರಾಮಗಳಲ್ಲಿ ಸಂಭ್ರಮಾಚರಣೆ ನಡೆದಿದೆ. ಕರಾವಳಿಯ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಈ ಸಂದರ್ಭ ಅನ್ಯ ಕೋಮಿನ ಕಾಂಗ್ರೆಸ್‌‌ನ ಬೆಂಬಲಿತರು ಪುಂಡಾಟಿಕೆ ಮಾಡಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಚಾಕು ಇರಿತ ಮಾಡಿದ ಘಟನೆಯನ್ನು ನಾನು ಖಂಡಿಸುತ್ತೇನೆ.
ಇಡೀ ಪೊಲೀಸ್ ವ್ಯವಸ್ಥೆ ಕಾಂಗ್ರೆಸ್‌ ಕಚೇರಿ ಒಳಗೆ ಕೆಲಸ ಮಾಡುತ್ತಿದೆ. ಚೂರಿ ಇರಿತ ಮಾಡಿದವರ ಮೇಲೆ ಕಾನೂನು ಕ್ರಮ ಆಗಿಲ್ಲ. ಆಸ್ಪತ್ರೆಗೆ ಭೇಟಿ ಕೊಟ್ಟು ಕಾರ್ಯಕರ್ತನ ಜೊತೆ ನಿಲ್ಲುತ್ತೇನೆ ಅಂತ ಹೇಳಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ