ಉಡುಪಿಯಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಕೆ‌ಎಸ್‌ಸಿ‌ಎ ಅಧ್ಯಕ್ಷರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಉಡುಪಿಯಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸಹಕಾರ ನೀಡುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷರಾದ ರಘುರಾಮ್ ಭಟ್‌ರವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮನವಿ ಮಾಡಿದರು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಕಚೇರಿಯಲ್ಲಿ ಅಧ್ಯಕ್ಷ ರಘುರಾಮ್ ಭಟ್‌ರವರನ್ನು ಭೇಟಿಯಾದ ಯಶ್‌ಪಾಲ್ ಸುವರ್ಣ, ಉಡುಪಿ ಜಿಲ್ಲೆಯಲ್ಲಿ ಕ್ರಿಕೆಟ್ ಪ್ರತಿಭೆಗಳಿಗೆ ಆಟವಾಡಲು ಉತ್ತಮ ಕ್ರೀಡಾಂಗಣದ ಕೊರತೆಯಿದ್ದು, ಉಡುಪಿ ಭಾಗದಲ್ಲಿ ಅಂತರಾಷ್ಟ್ರೀಯ ದರ್ಜೆಯ ಕ್ರೀಡಾಂಗಣ ನಿರ್ಮಾಣಗೊಂಡರೆ ಕ್ರಿಕೆಟ್ ಆಟಗಾರರಿಗೆ ಅನುಕೂಲವಾಗಲಿದೆ.

ಈಗಾಗಲೇ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಸರಕಾರಿ ಜಾಗಗಳನ್ನು ಕ್ರೀಡಾಂಗಣ ನಿರ್ಮಾಣಕ್ಕಾಗಿ ಮೀಸಲಿ‌ರಿಸಿದ್ದು, ಶೀಘ್ರದಲ್ಲೇ ಉಡುಪಿಗೆ ಭೇಟಿ ನೀಡಿ ಕ್ರೀಡಾಂಗಣ ನಿರ್ಮಾಣಕ್ಕೆ ಪೂರಕ ಜಾಗವನ್ನು ಗುರುತಿಸಿ ಅನುಮೋದನೆ ನೀಡುವಂತೆ ಅಧ್ಯಕ್ಷರಿಗೆ ಮನವಿ ಮಾಡಿದರು.

ಕೇಂದ್ರ ಸರಕಾರದ ಕ್ರೀಡಾ ಇಲಾಖೆ ಕ್ರೀಡೆಗೆ ಸಂಬಂಧಿತ ಕ್ರೀಡಾಂಗಣ ಸಹಿತ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿದ್ದು, ಕೇಂದ್ರ ಸರ್ಕಾರದ ಸಹಯೋಗದಲ್ಲಿ ಉಡುಪಿಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿಶೇಷ ಸಹಕಾರ ನೀಡುವಂತೆ ಮನವಿ ಮಾಡಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ