ಬೀಜಾಡಿ : ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ ಬೀಜಾಡಿಯ ಅನೂಪ್ ಪೂಜಾರಿಯವರ ಮನೆಗೆ ಭೇಟಿ ನೀಡಿ ಸಾಂತ್ವನ ತಿಳಿಸಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ತಮ್ಮ ವೈಯಕ್ತಿಕ ನೆಲೆಯಲ್ಲಿ 1 ಲಕ್ಷ ರೂ. ಚೆಕ್ ನೀಡಿ ಅನೂಪ್ ಅವರ ಪುತ್ರಿ ಇಶಾನಿ ಅವರ ಹೆಸರಿನಲ್ಲಿ ನಿಖರ ಠೇವಣೆ ಇಡುವಂತೆ ಹೇಳಿದರು.
ಬಳಿಕ ಸುದ್ದಿಗಾರರೊದಿಗೆ ಮಾತನಾಡಿದ ಅವರು, ಅನೂಪ್ ಅವರ ನಿಧನ ಕರಾವಳಿಯ ಜನರಿಗೆ ಅತೀವ ದುಃಖವನ್ನು ತಂದಿದೆ. ಸೈನ್ಯಕ್ಕೆ ಸೇರುವ ಯುವಕರಿಗೆ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಅಕಾಡೆಮಿಯೊಂದನ್ನು ಹುಟ್ಟುಹಾಕಬೇಕು ಎನ್ನುವ ಕನಸುಗಳು ಅನೂಪ್ ಪೂಜಾರಿ ಅವರಿಗಿತ್ತು ಎನ್ನುವುದನ್ನು ಸ್ಥಳೀಯರು ತಿಳಿಸಿದ್ದಾರೆ. ಅವರ ಕನಸನ್ನು ನನಸು ಮಾಡಲು ಯಾವುದೇ ಸಲಹೆ ಹಾಗೂ ಸಹಕಾರಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಒಟ್ಟಾಗಿ ಪ್ರಯತ್ನ ಮಾಡುವುದಾಗಿ ತಿಳಿಸಿದರು.