ಚೂರಿ ಇರಿತಕ್ಕೊಳಗಾದ ಬಿಜೆಪಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಯಶ್ಪಾಲ್ ಸುವರ್ಣ

ಉಡುಪಿ : ಉಳ್ಳಾಲ ಬೋಳಿಯಾರಿನಲ್ಲಿ ಭಾರತ ಮಾತೆಗೆ ಜಯಕಾರ ಕೂಗಿದ ಕಾರಣಕ್ಕಾಗಿ ಮತಾಂಧರಿಂದ ತೀವ್ರ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್ ಹಾಗೂ ವಿನೋದ್‌ರವರನ್ನು ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ನಂದನ್ ಮಲ್ಯ, ಬಿಜೆಪಿ ಮಂಗಳೂರು ದಕ್ಷಿಣ ಉಪಾಧ್ಯಕ್ಷರಾದ ಶ್ರೀ ಸಂದೀಪ್ ಶೆಟ್ಟಿ ಎಕ್ಕೂರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ