ಉಡುಪಿ : ನಗರಸಭೆಯ ಒಳಕಾಡು ವಾರ್ಡಿನ 30 ಲಕ್ಷ ವೆಚ್ಚದಲ್ಲಿ ನಡೆಯಲಿರುವ ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಶ್ರೀ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಶ್‌ಪಾಲ್ ಸುವರ್ಣ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃಧ್ದಿಪಡಿಸಿ ಅಂತರ್ಜಲ ಮಟ್ಟವನ್ನು ಸುಧಾರಿಸಲು ವಿಶೇಷ ಆದ್ಯತೆ ನೀಡಲಾಗುತ್ತಿದೆ. ಕೆರೆಗಳ ಸುತ್ತ ವಾಕಿಂಗ್ ಟ್ರ್ಯಾಕ್ ಹಾಗೂ ಬೆಂಚುಗಳ ಅಳವಡಿಕೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಯೋಜನೆ ರೂಪಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ ಕಲ್ಮಾಡಿ, ಸ್ಥಳೀಯ ಪ್ರಮುಖರಾದ ನಾಗೇಶ್ ಹೆಗ್ಡೆ, ಸರ್ವಜ್ಞ ರಾವ್, ಮಂಜುನಾಥ ಹೆಬ್ಬಾರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.