ಉಡುಪಿ : ಉಡುಪಿ ನಗರಸಭೆ ವ್ಯಾಪ್ತಿಯ ಶೆಟ್ಟಿಬೆಟ್ಟು ವಾರ್ಡಿನ ಮಾರುತಿ ನಗರ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ ಮಾರುತಿ ನಗರ ನಾಗರಿಕರ ಬೇಡಿಕೆಯ ಮೇರೆಗೆ ನಗರಸಭೆಯ ವತಿಯಿಂದ 60 ಲಕ್ಷ ಅನುದಾನ ಒದಗಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಶೆಟ್ಟಿ ಬೆಟ್ಟು ವಾರ್ಡಿನ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ನಗರಸಭೆ ಮಾಜಿ ಅಧ್ಯಕ್ಷರಾದ ದಿನಕರ ಶೆಟ್ಟಿ ಹೆರ್ಗ, ನಗರಸಭಾ ಸದಸ್ಯೆ ಅಶ್ವಿನಿ ಅರುಣ್, ಸುಮಿತ್ರಾ ನಾಯಕ್, ಹರೀಶ್ ಶೆಟ್ಟಿ ಅಂಬಲಪಾಡಿ, ಗಿರಿಧರ ಆಚಾರ್ಯ ಕರಂಬಳ್ಳಿ, ಸ್ಥಳೀಯ ಮುಖಂಡರಾದ ದುರ್ಗಾದಾಸ್ ರೈ, ದಿವಾಕರ ಶೆಟ್ಟಿ, ಅಕ್ಷಿತ್ ಶೆಟ್ಟಿ, ಶ್ರೀ ವಾಸುದೇವ ಶೆಣೈ, ಕೃಷ್ಣ ಆಚಾರ್ಯ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.