ಉಡುಪಿ : ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷ ಶ್ರೀ ಪ್ರಭಾಕರ ಪೂಜಾರಿ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.
ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್ಥ್ಯ, ಒಳಹರಿವು ಬಗ್ಗೆ ಚರ್ಚೆ ನಡೆಸಿ ಬೇಸಿಗೆ ಕಾಲದಲ್ಲಿ ನಗರದ ನೀರು ಸರಬರಾಜಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಾರಾಹಿ ಯೋಜನೆಯ ನೀರು ಸರಬರಾಜು ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು ಕುಡಿಯುವ ನೀರಿನ ಸಮಸ್ಯೆ ಪರಿಹಾರ ದೊರೆತರೂ ಬಜೆ ಅಣೆಕಟ್ಟಿನ ನೀರು ಸರಬರಾಜಿಗೆ ಕೂಡ ಆದ್ಯತೆ ನೀಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸುಂದರ ಕಲ್ಮಾಡಿ, ನಗರಸಭಾ ಸದಸ್ಯರಾದ ಶ್ರೀ ಗಿರೀಶ್ ಅಂಚನ್, ಶ್ರೀ ಟಿ. ಜಿ. ಹೆಗ್ಡೆ, ಶ್ರೀ ಮಂಜುನಾಥ ಮಣಿಪಾಲ, ಶ್ರೀಮತಿ ವಿಜಯಲಕ್ಷ್ಮೀ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ದುರ್ಗಾ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.