ಮಳೆಯಿಂದ ಹಾನಿಗೊಳಗಾದ ಶಾರದಾ ಪೂಜಾರ್ತಿ ಮನೆಗೆ ಶಾಸಕರ ಭೇಟಿ : ಪರಿಹಾರದ ಭರವಸೆ

ಉಡುಪಿ : ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಕಟ್ಟೆಗುಡ್ಡೆಯಲ್ಲಿ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಶಾರದಾ ಅವರ ಮನೆ ಕುಸಿದು ಸಂಪೂರ್ಣ ಹಾನಿಗೀಡಾದ ಹಿನ್ನೆಲೆಯಲ್ಲಿ ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ‌ರವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಶಾಂತ್ ಸಾಲ್ಯಾನ್, ರಾಘವೇಂದ್ರ ಕುತ್ಪಾಡಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿನಕರ ಬಾಬು, ಪಕ್ಷದ ಪ್ರಮುಖರಾದ ಜಯಕರ ಸನಿಲ್, ಗಣೇಶ್ ಕುಮಾರ್ ಸಂಪಿಗೆ ನಗರ, ರಾಕೇಶ್, ಕಡೆಕಾರ್ ಪಂಚಾಯತ್ ಅಭಿವದ್ಧಿ ಅಧಿಕಾರಿ ಸಿದ್ದೇಶ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ