ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲರ್ಸ್ ಪ್ರತಿಭಟನೆ

ಮಂಗಳೂರು : “ನಮ್ಮಲ್ಲಿ ಹಾಗು ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್‌ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್‌ನ ಸರ್ವಿಸ್ ಸೆಂಟರ್ ಮ್ಯಾಪಲ್ ಅನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಕೋರಿದಾಗ ಅವರ ಉಡಾಫೆ ಉತ್ತರ ಗ್ರಾಹಕರಿಗೆ ಆಘಾತ ಉಂಟು ಮಾಡಿದೆ. ಗ್ರಾಹಕರ ಹಿತದೃಷ್ಟಿಯಿಂದ, ಆಪಲ್‌ನ ಮ್ಯಾಪಲ್ ಸರ್ವಿಸ್ ಸೆಂಟರ್‌‌ನ ಕಳಪೆ ಸೇವೆಗಳ ವಿರುದ್ಧ ಪ್ರತಿಭಟನೆ ನಡೆಸುವ ಅನಿವಾರ್ಯತೆ ಉಂಟಾಗಿದೆ. ಹೀಗಾಗಿ ಜ್ಯೋತಿ ಸರ್ಕಲ್‌ನಿಂದ ಬೆಳಗ್ಗೆ 11 ಗಂಟೆಗೆ ಹೊರಟು ಆಪಲ್‌ನ ಸರ್ವಿಸ್ ಸೆಂಟರ್ ಮ್ಯಾಪಲ್‌ನ ಎದುರುಗಡೆಯಿಂದ ಕ್ಲಾಕ್ ಟವರ್‌ವರಗೆ ನಮ್ಮ ಪ್ರತಿಭಟನಾ ಮೆರವಣಿಗೆ ಮೂಲಕ ಬಂದು ಕ್ಲಾಕ್ ಟವರ್‌ನಲ್ಲಿ ನಾವು ನಮ್ಮ ಬೇಡಿಕೆಗಳನ್ನು ಆಪಲ್ ಕಂಪೆನಿಯ ಮುಂದೆ ಇಡಲಿದ್ದೇವೆ“ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ರಾಜ್ಯ ಸುದ್ದಿ ಮತ್ತು ಮಾಧ್ಯಮ ನಿರ್ವಾಹಕ ವಿವೇಕ್ ಜಿ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

”ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ಥಳೀಯ ರೀಟೇಲರ್‌ಗಳು ತಮ್ಮ ಗ್ರಾಹಕರಿಗೋಸ್ಕರ ಬೀದಿಗೆ ಇಳಿದು
ಪ್ರತಿಭಟಿಸುತ್ತಿದ್ದಾರೆ. ಇದರಲ್ಲಿ ಹಲವು ನೊಂದ ಗ್ರಾಹಕರು ಪಾಲ್ಗೊಳ್ಳುತ್ತಿದ್ದಾರೆ ಹಾಗೂ ಮತ್ತು ಹಲವು ಸಮಸ್ಯೆಗೊಳಗಾದ
ಗ್ರಾಹಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿ ಬೆಂಬಲ ನೀಡಬೇಕಾಗಿ ಕೇಳಿ ಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಸಮಸ್ಯೆಗಳು ಬಂದರೆ ಫ್ಲಿಪ್‌ಕಾ‌ರ್ಟ್ ಅಥವಾ ಅಮೆಜಾನ್‌ನಂತಹ ವಿದೇಶೀ ಕಂಪನಿಗಳು ಗ್ರಾಹಕರ ಹಿತರಕ್ಷಣೆಗೆ ನಿಲ್ಲುವುದಿಲ್ಲ. ಕೇವಲ ಸ್ಥಳೀಯ ಅಂಗಡಿಗಳು ಮಾತ್ರ ಗ್ರಾಹಕರ ಹಿತರಕ್ಷಣೆಗೆ ಹಾಗು ಅವರ ಅನುಕೂಲಕ್ಕೆ ನಿಲ್ಲುತ್ತೇವೆ ಮತ್ತು ಹಾಗೆ ಮುಂದಿನ ಹಬ್ಬದ ಖರೀದಿಯನ್ನು ಗ್ರಾಹಕರು ಆದಷ್ಟು ಸ್ಥಳೀಯ ಅಂಗಡಿಗಳಲ್ಲಿ ವ್ಯಾಪಾರ ನಡೆಸಿ ಸ್ಥಳೀಯರನ್ನು ಬೆಂಬಲಿಸ‌ಬೇಕಾಗಿ ವಿನಂತಿಸಿ ಕೊಳ್ಳುತ್ತಿದ್ದೇವೆ“ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಚೇರ್‌ಮೆನ್ ಗುರುದತ್ ಕಾಮತ್, ಅಧ್ಯಕ್ಷ ರಾಜೇಶ್ ಮಾಬಿಯಾನ್, ಕಾರ್ಯದರ್ಶಿ ಇಮ್ರಾನ್, ಸ್ಥಾಪಕ ಅಧ್ಯಕ್ಷ ಸಲೀಮ್, ಮಾಜಿ ಅಧ್ಯಕ್ಷ ಶೈಲೇಂದ್ರ ಸರಳಾಯ, ಉಪಾಧ್ಯಕ್ಷ ಅಝರ್ ಮೊಹಮದ್ ಮತ್ತಿತರರು ಉಪಸ್ಥಿತರಿದ್ದರು.

Related posts

ಕೋಟತಟ್ಟುವಿನಲ್ಲಿ ಹೆಜ್ಜೇನು ದಾಳಿ : ಇಬ್ಬರ ಸ್ಥಿತಿ ಗಂಭೀರ

ಬಾಕಿ ಇರುವ ಮನೆಹಾನಿ, ಬೆಳೆಹಾನಿ ಪರಿಹಾರ ತಕ್ಷಣ ವಿತರಿಸಿ – ಅಧಿಕಾರಿಗಳಿಗೆ ಎಡಿಸಿ ಸೂಚನೆ

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್