ಸ.ಪ್ರೌ.ಶಾಲೆ ಮೂಡುಮಾರ್ನಾಡು ಇಲ್ಲಿನ ವಿದ್ಯಾರ್ಥಿ ಸುಮಂತ್ ಎಸ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮೂಡುಬಿದಿರೆ : ತಾಲೂಕಿನ ಮೂಡುಮಾರ್ನಾಡು ಸರಕಾರಿ ಫ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಎಸ್ ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿಯಲ್ಲಿ ನಡೆದ ದಕ್ಷಿಣ ಭಾರತ ವಲಯ ಚಾಂಪಿಯನ್‌ಶಿಪ್‌ನಲ್ಲಿ 600ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಹಿಂದೆ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದರು. ಬೆಂಗಳೂರಿನ ಹೆಚ್‌ಸಿಎಲ್ ಫೌಂಡೇಶನ್ ಈ ಕ್ರೀಡಾಕೂಟಗಳನ್ನು ಆಯೋಜಿಸಿತ್ತು.

ಸುಮಂತ್ ಎಸ್. ಅವರು ಕೆಲ್ಲಪುತ್ತಿಗೆಯ ಶೇಖರ ಪೂಜಾರಿ ಮತ್ತು ಮೋಹಿನಿಯವರ ಪುತ್ರರಾಗಿದ್ದಾರೆ

ಮೂಡುಮಾರ್ನಾಡು ಶಾಲೆಯ ವಿದ್ಯಾರ್ಥಿಯ ಈ ಸಾಧನೆಗೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಭಾಸ್ಕರ ಎಸ್. ಕೋಟ್ಯಾನ್ ಮತ್ತು ಸಮಿತಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯಿನಿ ಡಾ. ರಾಜಶ್ರೀ ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ