ಮಂಗಳೂರು ಜೈಲಿನಲ್ಲಿ ಫುಡ್ ಪಾಯಿಸನ್ 30ಕ್ಕೂ ಅಧಿಕ ಕೈದಿಗಳು ಅಸ್ವಸ್ಥ

ಮಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿನ ಸುಮಾರು ಮೂವತ್ತಕ್ಕೂ ಅಧಿಕ ಕೈದಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಮಧ್ಯಾಹ್ನ ಆಹಾರ ಸೇವಿಸಿದ ಕೆಲ ಸಮಯದ ಬಳಿಕ ಕೈದಿಗಳು ವಾಂತಿ ಮಾಡಲು ಆರಂಭಿಸಿದ್ದಾರೆ. ಇನ್ನೂ ಕೆಲವರಿಗೆ ವಾಂತಿಭೇದಿ ಎರಡೂ ಕೂಡಾ ಕಾಣಸಿಕೊಂಡು ತಲೆ ಸುತ್ತಿ ಬಿದ್ದಿದ್ದಾರೆ.

ಕೈದಿಗಳ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ತಕ್ಷಣ ಜೈಲಿನ ಅಧಿಕಾರಿಗಳು ಭದ್ರತೆಯೊಂದಿಗೆ ಅನಾರೋಗ್ಯಕ್ಕೆ ಒಳಗಾದವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಸ್ಪತ್ರೆ ವೆನ್ಲಾಕ್‌‌ಗೆ ಹಲವರು ಒಳರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಫುಡ್ ಪಾಯ್ಸನ್ ಆಗಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ನೀರು ಅಥವಾ ಸೇವಿಸಿದ ಆಹಾರದಲ್ಲಿ ವಿಷ ಪದಾರ್ಥ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆಸ್ಪತ್ರೆಗೆ ದಾಖಲಾಗಿರುವ ಕೆಲ ಕೈದಿಗಳು ತೀವ್ರ ಅಸ್ವಸ್ಥರಾಗಿದ್ದು, ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

Related posts

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ