ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಜಾಥಾಗೆ ಸಂಸದ ಕೋಟ ಚಾಲನೆ

ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆಯ ಪ್ರಯುಕ್ತ ನಾರಾಯಣ ಗುರುಗಳ ಜಾಥಾಕ್ಕೆ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.

ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಿಂದ ಹೊರಟ ಜಾಥಾವು ಕಟಪಾಡಿ ಪೇಟೆಯಾಗಿ ಸಾಗಿ ರಾಷ್ಟ್ರೀಯ ಹೆದ್ದಾರಿ 66 ಕಲ್ಲಾಪು ಮಾರ್ಗವಾಗಿ ವಿಶ್ವನಾಥ ಕ್ಷೇತ್ರದಲ್ಲಿ ಸಮಾರೋಪಗೊಂಡಿತು.

ಕಟಪಾಡಿ ವಿಶ್ವನಾಥ ಕ್ಷೇತ್ರ ಮತ್ತು ಶ್ರೀ ನಾರಾಯಣ ಗುರು ಸೇವಾದಳ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿದ್ದು, ಸಂದೇಶ ಸಾರುವ ಈ ಜಾಥಾದಲ್ಲಿ ಬಿಲ್ಲವ ಮುಖಂಡರು, ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿಯ ಸದಸ್ಯರು ಸಹಿತ ಬಿಲ್ಲವ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾದರು. ಬಳಿಕ ಮಾತನಾಡಿದ ಸಂಸದ ಕೋಟ, ಇವತ್ತು ರಾಜ್ಯಾದ್ಯಂತ ಮತ್ತು ದೇಶಾದ್ಯಂತ ನಾರಾಯಣ ಗುರುಗಳ ಜಯಂತಿ, ಆಚರಣೆ ಮಾಡಲಾಗುತ್ತಿದೆ. ಒಂದೇ ದೈವ ಮತ್ತು ಒಂದೇ ಕುಲ ಎನ್ನುವ ಅವರ ಸಂದೇಶ ನಮ್ಮೆಲ್ಲರಿಗೂ ದಾರಿದೀಪವಾಗಿದೆ. ಸಮಾಜದ ರಕ್ತರಂಜಿತ ವಾತಾವರಣ ತಿಳಿಯಾಗಿ, ಗುರುಗಳ ಸಂದೇಶದಂತೆ ಸಮಾಜದಲ್ಲಿ ಶಾಂತಿ ನೆಲೆಸಲಿ ಎಂದು ಹಾರೈಸಿದ್ದಾರೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು