ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಂಸದ ಕೋಟ ಸಭೆ

ಉಡುಪಿ : ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ನಡೆಸಿದರು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯನ್ನು ಅತ್ಯಂತ ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು, ಅಂಡರ್ ಪಾಸ್ ಕಾಮಗಾರಿ ಪ್ರದೇಶದ ಬಂಡೆ ತೆರವು ಕಾರ್ಯಾಚರಣೆಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂತೆಕಟ್ಟೆ ಸಹಿತ ರಾಷ್ಟೀಯ ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ತೊಡಕಾಗಿರುವ ಹೊಂಡ ಗುಂಡಿಗಳನ್ನು ಮುಚ್ಚುವುದು, ರಸ್ತೆ ಸುರಕ್ಷತೆಯ ನಿಟ್ಟಿನಲ್ಲಿ ಸಮರ್ಪಕ ಬೀದಿ ದೀಪ, ಸೂಚನಾ ಫಲಕ ಅಳವಡಿಕೆ ಹಾಗೂ ಸಾರ್ವಜನಿಕರ ಮನವಿ ಮೇರೆಗೆ ಅತೀ ಅಗತ್ಯ ಸ್ಥಳಗಳಲ್ಲಿ ಸರ್ವೀಸ್ ರೋಡ್ ನಿರ್ಮಾಣದ ಬಗ್ಗೆ ತಕ್ಷಣ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು