ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಂಸದ ಕೋಟ – ಹೆದ್ದಾರಿ ಕಾಮಗಾರಿಗೆ ವೇಗ ನೀಡುವಂತೆ ಮನವಿ

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.
ಉಡುಪಿ ಜಿಲ್ಲೆಯ ಸಂತೆಕಟ್ಟೆ ಕಲ್ಯಾಣಪುರದ ಸುರಂಗ ಮಾರ್ಗ, ಇಂದ್ರಾಳಿಯ ಮೇಲ್ಸೇತುವೆ, ಮಲ್ಪೆ ಭೂಸ್ವಾಧೀನದ ವಿಳಂಬ ಮತ್ತು ನೆನೆಗುದ್ದಿಗೆ ಬಿದ್ದಿರುವ ತನಿಕೋಡು ಗೇಟ್‌ನಿಂದ ಎಸ್.ಕೆ. ಬಾರ್ಡರ್ ವರೆಗಿನ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಗಳನ್ನು ತುರ್ತು ಪರಿಹರಿಸಬೇಕೆಂದು ಮನವಿ ಸ್ವೀಕರಿಸಿದ ಸಚಿವ ಗಡ್ಕರಿ ಸಂಬಂಧಿಸಿದ ಅಧಿಕಾರಿಗಳಿಗೆ ತುರ್ತು ಆದೇಶ ನೀಡಿ ಕಾಮಗಾರಿಗಳನ್ನು ವಿಳಂಬವಿಲ್ಲದೆ ಅತಿ ಶೀಘ್ರದಲ್ಲಿ ಮುಗಿಸುವಂತೆ ಆದೇಶ ನೀಡಿದರು.
ಈ ಸಂದರ್ಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಜೊತೆಗೆ ಕೇಂದ್ರ ಸಚಿವ ವಿ.ಸೋಮಣ್ಣ, ಸಂಸದ ಬಿ ವೈ ರಾಘವೇಂದ್ರ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ