ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಕೋಟ : ಶೀಘ್ರ ಕಾಮಗಾರಿ ಪೂರ್ಣಗೊಳಿಸುವ ಭರವಸೆ

ಉಡುಪಿ: ಉಡುಪಿಗೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ನಗರದ ಇಂದ್ರಾಳಿ ರೈಲ್ವೆ ಸೇತುವೆ ಅಪೂರ್ಣ ಕಾಮಗಾರಿಯ ವೀಕ್ಷಣೆ ನಡೆಸಿದರು. ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಬಿಜೆಪಿ ಮುಖಂಡರು ಸಾಥ್ ನೀಡಿದರು.

ಕಾಮಗಾರಿ ವೀಕ್ಷಿಸಿ ಪ್ರತಿಕ್ರಿಯಿಸಿದ ಸಂಸದರು, ಕೆಲಸ ಸ್ಥಗಿತವಾಗಿ ನಾಲ್ಕು ವರ್ಷವಾಗಿದೆ, ಈ ಭಾಗದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾನು ಭೇಟಿ ನೀಡಿದ್ದೇನೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದೇನೆ. ಜುಲೈ 2ರ ಒಳಗಾಗಿ ಮೆಸ್ಕಾಂನವರು ವಿದ್ಯುತ್ ಕಂಬಗಳನ್ನು ಶಿಫ್ಟ್ ಮಾಡುವುದಾಗಿ ಹೇಳಿದ್ದಾರೆ. ಎರಡು ತಿಂಗಳ ಒಳಗಾಗಿ ಎಲ್ಲ ಕಾಮಗಾರಿಯನ್ನು ಮುಗಿಸುವ ಭರವಸೆ ಕೊಟ್ಟಿದ್ದಾರೆ. ಸೆಪ್ಟೆಂಬರ್ 15ರೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

ಅಧಿಕಾರಿಗಳು ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ್ದು, ಮಳೆ ವಿಪರೀತವಾದರೆ 15 ದಿನ ವ್ಯತ್ಯಾಸ ಆಗಬಹುದು. ತಮ್ಮಿಂದ ಆಗಿರುವ ಪ್ರಮಾದವನ್ನು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ಕೆಲಸ ಪೂರ್ಣಗೊಳ್ಳದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡುತ್ತೇನೆ ಎಂದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ