ಉಡುಪಿ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಧರಣಿಗೆ ಸಂಸದ ಕೋಟ ಭೇಟಿ

ಉಡುಪಿ : ಉಡುಪಿ ಜಿಲ್ಲೆಯ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಹಲವು ಬೇಡಿಕೆಗಳನ್ನು ಮುಂದಿರಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿ ಧರಣಿ ನಿರತರ ಮನವಿ ಸ್ವೀಕರಿಸಿದರು.

ಸಮಸ್ಯೆಗಳನ್ನು ಹೇಳಿಕೊಂಡ ಗ್ರಾಮ ಆಡಳಿತ ಅಧಿಕಾರಿಗಳು, 15ಕ್ಕೂ ಹೆಚ್ಚು APPಗಳ ಮೂಲಕ ಇಲಾಖೆಯ ಕಾರ್ಯಕ್ರಮಗಳು ನಡೆಯುತ್ತಿದ್ದು ನಮಗೆ ಇಲ್ಲಿಯವರೆಗೆ ಯಾವುದೇ ಮೊಬೈಲ್ ಫೋನ್‌ಗಳ ಸರಬರಾಜು ಮಾಡಿಲ್ಲ ಎಂದು ದೂರಿದರು. ತಮ್ಮಿಂದ ಇಲಾಖೆಯು ರಜಾ ದಿನಗಳಲ್ಲಿಯೂ ಕೆಲಸ ಮಾಡಿಸಿಕೊಳ್ಳುತ್ತಿದ್ದು ಹೆಚ್ಚುವರಿ ಸೌಲಭ್ಯ ನೀಡುತ್ತಿಲ್ಲ. ಅಂತರ್ ಜಿಲ್ಲಾ ವರ್ಗಾವಣೆ ನಿಲುಗಡೆ ಮಾಡಿದ್ದು ನಾವು ಕೆಲವರಂತೂ 15-20 ವರ್ಷಗಳಿಂದ ತವರು ಜಿಲ್ಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ನಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲು ತಾವು ಸರ್ಕಾರದ ಮೇಲೆ ಒತ್ತಡ ತರಬೇಕೆಂದು ವಿನಂತಿಸಿದರು. ಮನವಿ ಸ್ವೀಕರಿಸಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸಂಬಂಧಪಟ್ಟ ಕಂದಾಯ ಸಚಿವರ ಜೊತೆ ಗ್ರಾಮ ಆಡಳಿತ ಅಧಿಕಾರಿಗಳ ಕೋರಿಕೆ ಸಲ್ಲಿಸುತ್ತೇನೆಂದು ಎಂದು ಹೇಳಿದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್