ಮಳೆ ನೀರು ಹರಿಯುವ ತೋಡಿಗೆ ಕಸಕಡ್ಡಿ ಹಾಕದಂತೆ ನಗರಸಭೆ ಸೂಚನೆ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಮನೆಯವರುಗಳು ತೆಂಗಿನ ಗರಿ, ಸಿಪ್ಪೆ, ಕಸಕಡ್ಡಿ ಇತ್ಯಾದಿಗಳನ್ನು ಮಳೆ ನೀರು ಹರಿಯುವ ತೋಡಿನಲ್ಲಿ ಹಾಕುತ್ತಿರುವುದು ಕಂಡು ಬಂದಿದ್ದು, ಇದರಿಂದ ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ಅಲ್ಲಲ್ಲಿ ಕೃತಕ ನೆರೆ ಉಂಟಾಗುವ ಸಾಧ್ಯತೆ ಇರುತ್ತದೆ.

ತೆಂಗಿನ ಗರಿ, ಸಿಪ್ಪೆ, ಕಸಕಡ್ಡಿ ಇತ್ಯಾದಿಗಳನ್ನು ಮಳೆ ನೀರು ಹರಿಯುವ ತೋಡಿನಲ್ಲಿ ಹಾಕಿರುವುದನ್ನು ಕೂಡಲೇ ತೆರವುಗೊಳಿಸಿ, ಮಳೆ ನೀರು ಸರಾಗವಾಗಿ ಹರಿಯಲು ಅನುಕೂಲ ಮಾಡಿಕೊಡಬೇಕು.

ಮುಂದಿನ ದಿನಗಳಲ್ಲಿ ಮಳೆ ನೀರು ಹರಿಯವ ತೋಡಿಗೆ ಕಸಕಡ್ಡಿ ಇತ್ಯಾದಿಗಳನ್ನು ಹಾಕುತ್ತಿರುವುದು ಕಂಡು ಬಂದಲ್ಲಿ ಹಾಗೂ ಈ ಬಗ್ಗೆ ನಗರಸಭೆಗೆ ಮಾಹಿತಿ ನೀಡಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಪೌರಸಭಾ ಅಧಿನಿಯಮದಡಿ ಸೂಕ್ತ ದಂಡ ವಿಧಿಸಿ, ಸದರಿಯವರಿಂದಲೇ ಚರಂಡಿಯಲ್ಲಿರುವ ಕಸಕಡ್ಡಿಗಳನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ