ಬೆಳ್ಳಂಬೆಳಿಗ್ಗೆ ವಿವಾಹಿತ ಮಹಿಳೆಯ ಕೊಲೆ – ಪತಿಯಿಂದಲೇ ಕೃತ್ಯ ಶಂಕೆ

ಕೋಟ : ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಬೆಳ್ಳಂಬೆಳಿಗ್ಗೆ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತ ಮಹಿಳೆ ಜಯಶ್ರೀ ಎಂದು ಗುರುತಿಸಲಾಗಿದ್ದು ಇವರು ಕೊಪ್ಪಳ ಮೂಲದವರಾಗಿದ್ದಾರೆ. 8 ತಿಂಗಳ ಹಿಂದೆಯಷ್ಟೆ ಮದುವೆಯಾಗಿ ಕಾರ್ಕಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರೆ. ಪತಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗುಂಡ್ಮಿ ಗ್ರಾಮದ ಕಿರಣ್ ಉಪಾಧ್ಯ ಎಂದು ತಿಳಿದು ಬಂದಿದೆ. ಶಂಕೆಯ ಮೇರೆಗೆ ಮೃತಳ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ