ನೂತನ ಜಿಲ್ಲಾಸ್ಪತ್ರೆಗೆ ದಿ.ಆಸ್ಕರ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಿ – ಕಾಂಗ್ರೆಸ್ ಮುಖಂಡರ ಮನವಿ

ಉಡುಪಿ : ಉಡುಪಿ ಜಿಲ್ಲಾ ಆಸ್ಪತ್ರೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸಜ್ಜಿತವಾದ ಆಸ್ಪತ್ರೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹಲವಾರು ಕೊಡುಗೆಯನ್ನು ಕೊಟ್ಟ ಮಾಜಿ ಲೋಕಸಭಾ ಸದಸ್ಯರು ಹಾಗೂ ಮಾಜಿ ಸಚಿವರಾಗಿ ಜನಸಾಮಾನ್ಯರ ಮನಸ್ಸನ್ನು ಪ್ರೀತಿಯಿಂದ ಗೆದ್ದ ಹಾಗೂ 5 ಬಾರಿ ಉಡುಪಿಯ ಸಂಸತ್ ಸದಸ್ಯ ಹಾಗೂ 4 ಬಾರಿ ರಾಜ್ಯ ಸಭಾ ಸದಸ್ಯರಾದ ದಿ. ಆಸ್ಕರ್ ಫರ್ನಾಂಡೀಸ್ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಕೈ ಮುಖಂಡರು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಸಮಾಜ ಸೇವಕರ ಕಾಂಗ್ರೆಸ್ ಮುಖಂಡ ಕೆ.ಕೃಷ್ಣಮೂರ್ತಿ ಆಚಾರ್ಯ ಅವರು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿಧಾನಸಭಾ ಸಭಾಧ್ಯಕ್ಷರಾದ ಯು. ಟಿ ಖಾದರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರಿಗೆ ಮನವಿ ಮಾಡಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ