ಬ್ರಹ್ಮಾವರದ ಸರಕಾರಿ ಪದವಿ ಪೂರ್ವ ಕಾಲೇಜು “ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್” ಆಗಿ ನಾಮಕರಣ

ಬ್ರಹ್ಮಾವರ : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ರಿ. ಬೆಂಗಳೂರು ಇದರ ವತಿಯಿಂದ ₹ 3 ಕೋಟಿ ಕೊಡುಗೆಯಿಂದ ಅಭಿವೃಧ್ದಿ ಪಡಿಸಿದ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜನ್ನು “ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್” ಆಗಿ ನಾಮಕರಣ ಮಾಡಲಾಯಿತು.

ಈ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ವಹಿಸಿ ಗ್ರಾಮೀಣ ಭಾಗದ ಸರಕಾರಿ ಶಾಲೆಯನ್ನು ಅಭಿವೃದ್ಧಿಗೊಳಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುತ್ತಿರುವ ಡಾ. ಎಚ್. ಎಸ್. ಶೆಟ್ಟಿ‌ಯವರಿಗೆ ವಿಶೇಷ ಅಭಿನಂದನೆ ಸಲ್ಲಿಸಿದರು.

‌ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಖ್ಯಾತ ಶಿಕ್ಷಣ ತಜ್ಞರಾದ ಡಾ. ಗುರುರಾಜ ಕರ್ಜಗಿ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಎಚ್. ಎಸ್. ಶೆಟ್ಟಿ, ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ