ಉಡುಪಿ : ಪರ್ಕಳದ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ, ನೆಂಪು ನರಸಿಂಹ ಭಟ್ (77) ನಿಧನ ಹೊಂದಿದರು.
ಕಾರ್ಕಳ, ವಂಡ್ಸೆ, ಪುತ್ತೂರು ಸಹಿತ ಅವಿಭಜಿತ ದ.ಕ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು. ಪಠ್ಯಪುಸ್ತಕ ಸಮಿತಿಯಲ್ಲಿದ್ದ ಇವರು ಸಾಹಿತ್ಯ ಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡಿದ್ದರು. ಹಲವಾರು ಕಥೆ, ಕವನಗಳನ್ನೂ ರಚಿಸಿದ್ದರು. ಇವರು ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದ ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.