ರಾಷ್ಟ್ರೀಯ ಹೆದ್ದಾರಿ ಸಂಚಾರ ದಟ್ಟಣೆ: ತ್ವರಿತ ಪರಿಹಾರಕ್ಕೆ ಯು.ಟಿ. ಖಾದರ್ ಸೂಚನೆ

ಮಂಗಳೂರು : ನಗರದ ನಂತೂರು, ಪಂಪ್‌ವೆಲ್ ಸಹಿತ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ಕೂಡಲೇ ಕಾರ್ಯಪ್ರವೃತ್ತರಾಗುವಂತೆ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಶನಿವಾರ ನಂತೂರು ವೃತ್ತದಲ್ಲಿ ದಿನವಿಡೀ ಸಂಚಾರ ದಟ್ಟಣೆ ಉಂಟಾಗಿ ನಗರದಲ್ಲಿ ಸಂಚಾರ ವ್ಯವಸ್ಥೆಗೆ ತೀವ್ರ ಅಡ್ಡಿಯಾಗಿ ಸ್ವತ: ಸ್ಪೀಕರ್ ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದರು. ಇದರಿಂದ ಜಿಪಂ ಸಭಾಂಗಣದಲ್ಲಿ ನಿಗದಿಯಾಗಿದ್ದ ಡೆಂಗ್ಯೂ ಸ್ಥಿತಿಗತಿ ಕುರಿತಂತೆ ಆಯೋಜಿಸಲಾದ ಸಭೆಗೆ ನಿಗದಿತ ಸಮಯಕ್ಕೆ ಪಾಲ್ಗೊಳ್ಳಲು ವಿಳಂಬವಾಯಿತು.

ಈ ಹಿನ್ನೆಲೆಯಲ್ಲಿ ಸಭೆಯ ಬಳಿಕ ಜಿಲ್ಲಾಧಿಕಾರಿಗೆ ನಂತೂರು ಮತ್ತು ಪಂಪ್‌ವೆಲ್ ವೃತ್ತದಲ್ಲಿ ಹೆದ್ದಾರಿಯಲ್ಲಿ ಬಿದ್ದಿರುವ ಗುಂಡಿಗಳನ್ನು ಕೂಡಲೇ ಮುಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಲು ನಿರ್ದೇಶಿಸಿದರು.

Related posts

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಭಕ್ತರಿಂದ 1.5 ಲಕ್ಷ ಚೆಂಡು ಮಲ್ಲಿಗೆ ಸಮರ್ಪಣೆ