ಸಂಸದರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಮಣಿಪಾಲ : ರಾಷ್ಡ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ದಾರಿದೀಪಗಳ ಸಮರ್ಪಕ ನಿರ್ವಹಣೆ ಮಾಡಬೇಕು ಮತ್ತು ಪಡುಬಿದ್ರಿ ಹಾಗೂ ಕಟಪಾಡಿ ಭಾಗದಲ್ಲಿ ದಿನೇ ದಿನೇ ಅಪಘಾತಗಳು ಹೆಚ್ಚುತ್ತಿದ್ದು ಅಪಘಾತ ತಡೆಗೆ ಬ್ಯಾರಿಕೇಡ್ ಹಾಗೂ ರಿಫ್ಲೆಕ್ಟರ್‌ಗಳನ್ನು ಅಳವಡಿಸುವಂತೆ ಆಗ್ರಹ ಕೇಳಿಬಂತು. ಹೆಜಮಾಡಿಯ ಕನ್ನಂಗಾರ್ ಸುಜ್ಲಾನ್ ಗೇಟ್ ಬಳಿ ಸರ್ವಿಸ್ ರಸ್ತೆ ನಿರ್ಮಿಸುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಮತ್ತು ರಾಷ್ಟ್ರೀಯ ಹೆದ್ದಾರಿಯ ಚರಂಡಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಹಾಗೂ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಗ್ಯಾಸ್ ಪೈಪ್ ಲೈನ್ ಗುಂಡಿಗಳನ್ನು ತೆಗೆದಿದ್ದು ಮಳೆಗಾಲ ಸಮಯದಲ್ಲಿ ಇದರಲ್ಲಿ ನೀರು ತುಂಬಿ ಅಪಘಾತ ಸಂಭವಿಸುತ್ತಿದ್ದು ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಸಹಾಯಕ ಆಯುಕ್ತರಾದ ರಶ್ಮಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕುಮಾರ್, ರಾಷ್ಟ್ರೀಯ ಹೆದ್ದಾರಿ ಸಂಭಂದಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಡುಪಿ ಜಿಲ್ಲೆಯಲ್ಲಿ ಮಂಗನಕಾಯಿಲೆ ಪ್ರಕರಣ ಬಾರದಂತೆ ಮುನ್ನೆಚ್ಚರಿಕೆ ವಹಿಸಿ : ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ನಿಷೇಧಾಜ್ಞೆ, ಸಂತೆ, ಜಾತ್ರೆ ನಿಷೇಧ ಆದೇಶ ಹಿಂದೆಗೆತ : ಉಡುಪಿ ಜಿಲ್ಲಾಧಿಕಾರಿ

ಶಾಲಾ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಸವಾರ ಮೃತ್ಯು