ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್; ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ಪರಿಹಾರಕ್ಕೆ ಸುವರ್ಣಾವಕಾಶ

ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇದರ ನಿರ್ದೇಶನದ ಮೇರೆಗೆ ಇದೇ ಜುಲೈ 13ರಂದು ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಎಸ್. ಗಂಗಣ್ಣವರ್ ತಿಳಿಸಿದರು.

ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದರು.

ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಎಂ.ಡಿ.ಆರ್. ಪ್ರಕರಣ, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್‌/ಸಾಲದ ವಸೂಲಾತಿ ಪ್ರಕರಣಗಳು, ಮೋಟಾರು/ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು (ವಿಚ್ಚೇದನೆಯನ್ನು ಹೊರತುಪಡಿಸಿ), ಭೂಸ್ವಾಧೀನ ಪರಿಹಾರ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು